ಸಮಗ್ರ ಶಿಕ್ಷಣ ಕರ್ನಾಟಕ
ಸಮಗ್ರ ಶಿಕ್ಷಣ ಕರ್ನಾಟಕ

ಸಮಗ್ರ ಶಿಕ್ಷಣ ಕರ್ನಾಟಕ

ಶಾಲಾ ಶಿಕ್ಷಣ ಇಲಾಖೆ

×
ಅಭಿಪ್ರಾಯ
ಮಾಧ್ಯಮ ಮತ್ತು ಸಮುದಾಯ ಸಂಚಯನ

Home

ಮಾಧ್ಯಮ ಮತ್ತು ಸಮುದಾಯ ಸಂಚಯನ 

ಶಾಲಾ ಶಿಕ್ಷಣದಲ್ಲಿ ಸಮುದಾಯದ ಸದಸ್ಯರ ನಿಕಟ ಪಾಲ್ಗೊಳ್ಳುವಿಕೆ ಅತ್ಯಂತ ನಿರ್ಣಾಯಕ ಅಂಶವಾಗಿದೆ. ಏಕೆಂದರೆ ಇದು ಶಾಲೆಗಳಲ್ಲಿ ಸಮುದಾಯದ ಪರಿಣಾಮಕಾರಿ ಭಾಗವಹಿಸುವಿಕೆ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ಪ್ರಮುಖವಾಗಿದೆ. ಸಮುದಾಯದ ಪರಿಣಾಮಕಾರಿ ಭಾಗವಹಿಸುವಿಕೆಯಿಂದ ಸರ್ಕಾರಿ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನ, ಮೇಲ್ವಿಚಾರಣೆ, ಮೌಲ್ಯಮಾಪನ ಮತ್ತು ಮಾಲೀಕತ್ವವನ್ನು ಸಾಧಿಸಲು ಸಾಧ್ಯವಾಗುತ್ತದೆ. ಶಾಲೆಯಲ್ಲಿ ಸಮುದಾಯದ ಸಕ್ರಿಯ ಭಾಗವಹಿಸುವಿಕೆಯು ಪಾರದರ್ಶಕತೆ, ಉತ್ತರದಾಯಿತ್ವವನ್ನು ಖಾತ್ರಿಗೊಳಿಸುತ್ತದೆ ಮತ್ತು ಉತ್ತಮ ಕಾರ್ಯನಿರ್ವಹಣೆಗೆ ಸಮುದಾಯದ ಸಂಚಿತ ಜ್ಞಾನವನ್ನು ಪಡೆಯಲು ಸಹಾಯ ಮಾಡುತ್ತದೆ. ಶಾಲೆಯಲ್ಲಿ ಸಮುದಾಯ, ಪೋಷಕರು, ಶಿಕ್ಷಕರು ಮತ್ತು ಮಕ್ಕಳ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಕಚೇರಿಗಳು ಮತ್ತು ಜಿಲ್ಲಾ ಹಂತದಲ್ಲಿ ಅನುಭವಿ ಮತ್ತು ಸಕ್ರಿಯ ನಾಗರಿಕ ಸಮಾಜ ಸಂಸ್ಥೆಗಳೊಂದಿಗೆ ಕೈಜೋಡಿಸುತ್ತಿದೆ.